ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ.
ಬೆಂಗಳೂರಿನ ಪೈ ವಿಸ್ತಾ ಹೊಟೇಲ್‌ನಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಸಿ ಕಲಂ 417, 354 ಎ, 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದ ಅರುಣ್ ಪುತ್ತಿಲ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದೇ ವೇಳೆ ಅರುಣ್ ಪುತ್ತಿಲರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅರುಣ್ ಪುತ್ತಿಲರ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಅರುಣ್ ಪುತ್ತಿಲ ಮತ್ತು ಮಹಿಳೆಯೊಬ್ಬರ ಆಡಿಯೋ ವೈರಲ್ ಆಗಿತ್ತು.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದ ಅರುಣ್ ಪುತ್ತಿಲ, ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು.