ಮಂಗಳೂರುರಾಜಕೀಯರಾಜ್ಯ

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ವಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆ‌ರ್

Yashpal suvarna

ಉಡುಪಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಅವಮಾನ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ವಾಲ್ ಸುವರ್ಣ ಸೇರಿದಂತೆ ಹಲವಾರು ಮಂದಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್ ಐಆ‌ರ್ ದಾಖಲಾಗಿದೆ.

ಬ್ರಹ್ಮಾವರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಿಸಿ, ನಂತರ ತಡೆ ಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಈ ಪ್ರತಿಭಟನೆನಡೆಸಲಾಗಿತ್ತು.ಪ್ರತಿಭಟನೆಯಲ್ಲಿ ಸಿಎಂಸಿದ್ದರಾಮಯ್ಯ ಅವರಪ್ರತಿಕೃತಿಯನ್ನು ದಹಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸೌರಭ್ ಬಲ್ಲಾಳ್ ಅವರು ಮಣಿಪಾಲ ಠಾಣೆಗೆ ದೂರು ನೀಡಿದ್ದು, ನಗರಸಭಾ ಸದಸ್ಯ ಗಿರೀಶ್ ಅಂಚನ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಭಿರಾಜ್ ಸುವರ್ಣ ಪ್ರತಿಕೃತಿಗೆ ಪೆಟ್ರೋಲ್ ಸುರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಶಾಸಕ ಯಶಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಹಿಳಾ ಮೋರ್ಚಾದ ನಿಕಟಪೂರ್ವ ಅಧ್ಯಕ್ಷೆ ವೀಣಾ ಶೆಟ್ಟಿ ಮುಂತಾದ ಸುಮಾರು

ಕೇಸ್‌ನಿಂದ ದೃತಿಗೆಡುವ ಪ್ರಶ್ನೆಯೇ ಇಲ್ಲ: ಯತ್ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ವಿಶ್ವಮಾನ್ಯತೆ ಪಡೆದಿದ್ದು, ಜಿಲ್ಲೆಯ ಯುವ ಸಮುದಾಯವನ್ನು ದೇಶದ ಆಸ್ತಿಯನ್ನಾಗಿಸುವ ಶಿಕ್ಷಕರಿಗೆ ಮಾಡಿದ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೆರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜೊತೆ ಸದಾ ನಿಲ್ಲುತ್ತೇನೆ. ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಯತ್ಪಾಲ್ ಸುವರ್ಣ ಹೇಳಿದ್ದಾರೆ.

11 ಮಂದಿಯನ್ನು ದೂರಿನಲ್ಲಿ ಹೆಸರಿಲಾಗಿದ್ದು, ಅವರು ಶಾಂತಿ ಭಂಗವನ್ನುಂಟು ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಅವರನ್ನು ಅವಮಾನಿಸಿದ್ದಾರೆ. ಒಂದು ವರ್ಗವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನವೆಂಬರ್‌ನಲ್ಲಿ ತುಳು ಉತ್ಸವ ರೀತಿ ವೈವಿಧ್ಯಮಯ ಕಾರ್ಯಕ್ರಮ

kudlaadmin

ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಡುಗು, ನನ್ನನ್ನು ಯಾರಿಂದಲೂ ಅಲ್ಲಾಡಿಸಲಾಗದು: ಸಿದ್ದು

kudlaadmin

ಸಿದ್ಧರಾಮಯ್ಯನವರ ಪ್ರಬಲ ಬೆಂಬಲಕ್ಕೆ ಬಂದಂತೆ ದಕ್ಷಿಣ ಕನ್ನಡ ಹೊತ್ತಿ ಉರಿಯುತ್ತಿದೆ.

kudlaadmin

Leave a Comment